Wednesday, May 13

ಎಸ್‌ಸಿ-ಎಸ್‌ಟಿ ಮೀಸಲಾತಿ ವಿಚಾರ: ಜಾಗೃತಿ ಅಭಿಯಾನಕ್ಕೆ ಬಿಜೆಪಿ ತೀರ್ಮಾನ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್‌ಸಿ ಹಾಗೂ ಎಸ್‌ಟಿ ಸಮುದಾಯಗಳಿಗೆ ಹೆಚ್ಚಿಸಲಾಗಿದ್ದ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿಲ್ಲ ಎಂದು ಆರೋಪಿಸಿರುವ ಬಿಜೆಪಿ, ರಾಜ್ಯಾದ್ಯಂತ ಜಾಗೃತಿ ಅಭಿಯಾನ ಆರಂಭಿಸಲು ತೀರ್ಮಾನಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬಿಜೆಪಿ ಎಸ್‌ಸಿ/ಎಸ್‌ಟಿ ಮುಖಂಡರ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

ತಮ್ಮ ಸರ್ಕಾರದ ಅವಧಿಯಲ್ಲಿ ಎಸ್‌ಸಿ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಹೆಚ್ಚಿಸಲಾಗಿತ್ತು ಎಂದು ಬೊಮ್ಮಾಯಿ ಹೇಳಿದರು. ಈ ಹೆಚ್ಚುವರಿ ಮೀಸಲಾತಿಯಿಂದ ಸಾವಿರಾರು ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟುಗಳು ಲಭ್ಯವಾಗಿದ್ದವು ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್ ಆದೇಶ ಹಾಗೂ ಆಯೋಗಗಳ ವರದಿಗಳನ್ನು ಸರಿಯಾಗಿ ಜಾರಿಗೊಳಿಸದೆ ಕಾಂಗ್ರೆಸ್ ಸರ್ಕಾರ ಗೊಂದಲ ಸೃಷ್ಟಿಸುತ್ತಿದೆ ಎಂದು ಅವರು ಆರೋಪಿಸಿದರು.