
ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಮಾತುಗಳನ್ನಾಡಿರುವ ತಮಿಳು ನಟ ಕಮಲ್ ಹಾಸನ್ ವಿರುದ್ಧ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ನಟ ಕಮಲ್ ಹಾಸನ್ ಕ್ಷಣೆಯಾಚಿಸದ ಹೊರದು ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆಗೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಹೇಳಿದೆ.
ಕನ್ನಡ ಪರ ಸಂಘಟನೆಗಳ ಒತ್ತಾಯಕ್ಕೆ ಮಣಿದಿರುವ KFCC ಈ ಕುರಿತಂತೆ ಸ್ಪಷ್ಟನೆ ನೀಡಿದೆ. ಕಮಲ್ ಹಾಸನ್ ಕ್ಷಮೆಯಾಚಿಸದಿದ್ದರೆ ಅವರ ನಟನೆಯ ಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ನರಸಿಂಹಲು ಸ್ಪಷ್ಟಪಡಿಸಿದ್ದಾರೆ.