Wednesday, January 28

ಚಿತ್ರದುರ್ಗ: ಕಾರು-ಲಾರಿ ಡಿಕ್ಕಿಯಾಗಿ ನಾಲ್ವರ ಸಾವು

ಚಿತ್ರದುರ್ಗ: ಹಿರಿಯೂರು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು 23 ವರ್ಷದ ರಾಹುಲ್, ನಂಜುಂಡಿ ಹಾಗೂ 22 ವರ್ಷದ ವಿಶ್ವನಾಥ್, ಯಶ್ವಂತ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹಿರಿಯೂರು ಸಮೀಪದ ನಂಜಯ್ಯನಕೊಟ್ಟಿಗೆ ಗ್ರಾಮದವರು ಎನ್ನಲಾಗಿದೆ.

ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.