Wednesday, April 29

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ; ಪರಿಹಾರ 25 ಲಕ್ಷ ರೂ.ಗಳಿಗೆ ಹೆಚ್ಚಳ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಪರಿಹಾರವನ್ನು 25 ಲಕ್ಷ ರೂ.ಗಳಿಗೆ ರಾಜ್ಯ ಸರ್ಕಾರ ಹೆಚ್ಚಿಸಿದೆ. ಪರಿಹಾರವನ್ನು ತಲಾ ರೂ.10 ಲಕ್ಷದಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಆದೇಶಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಮ್ಮವರನ್ನು ಕಳೆದುಕೊಂಡು ನೊಂದಿರುವ ಕುಟುಂಬಗಳು ಆರ್ಥಿಕ ಸಮಸ್ಯೆಗಳಿಂದಾಗಿ ಇನ್ನಷ್ಟು ಸಂಕಷ್ಟಕ್ಕೆ ಒಳಗಾಗದಿರಲಿ ಎನ್ನುವುದು ನಮ್ಮ ಸರ್ಕಾರದ ಆಶಯ ಎಂದವರು ತಿಳಿಸಿದ್ದಾರೆ.