
ರಾಮನಗರ: ಜನವರಿ 6 ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಎಚ್ ಎ ಇಕ್ಬಾಲ್ ಹುಸೇನ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್, ಡಿಕೆಶಿ ಅವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ. ಅವರು ಜನವರಿ 6 ರಂದು ಮುಖ್ಯಮಂತ್ರಿಯಾಗಲಿದ್ದಾರೆ ಎಂದರು.
ಡಿಕೆಶಿಗೆ ಅವಕಾಶ ಸಿಗಬೇಕೆಂಬ ಆಗ್ರಹಕ್ಕೆ ಹೈಕಮಾಂಡ್ ಸ್ಪಂದಿಸುತ್ತಿದೆ. ಬಹುಶ: ಜನವರಿ 6ರಂದು ಸಿಎಂ ಸ್ಥಾನ ಸಿಗುವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದರು.
ನಾಯಕತ್ವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬೆಂಬಲಿಗ ಶಾಸಕ ಇಕ್ಬಾಲ್ ಹುಸೇನ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
