Friday, January 30

ದೆಹಲಿಯ ಸ್ಪೋಟದ ನಂತರ ರಾಜ್ಯದಲ್ಲೂ ಬಿಗಿ ಭದ್ರತೆ

ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಜನರಲ್ಲಿ ಸಿಎಂ ಮನವಿ ಮಾಡಿದ್ದಾರೆ.