Tuesday, August 11

ರಾಜ್ಯದ ಹಲವೆಡೆ ಈ ತಿಂಗಳ 26ರವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವೆಡೆ ಈ ತಿಂಗಳ 26ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಬೆಂಗಳೂರಿನಲ್ಲಿ ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.