Thursday, January 29

ವಾಯುಭಾರ ಕುಸಿತ; ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ, ಕೇರಳ ಕೇರಳ ರಾಜ್ಯಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

ಬೆಂಗಳೂರು: ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಲ ಕೊಳ್ಳಿಯಲ್ಲಿ ವಾಯುಭಾರ ಕುಸಿತ ಮತ್ತು ಪೂರ್ವ ಅರಬ್ಬಿ ಸಮುದ್ರದಲ್ಲಿನ ಹವಾಮಾನದ ವ್ಯತ್ಯಯದಿಂದಾಗಿ ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿಯ ಉದ್ದಕ್ಕೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇತ್ತ ಕರ್ನಾಟಕದ 13 ಜಿಲ್ಲೆಗಳಲ್ಲೂ ಸೆಪ್ಟೆಂಬರ್‌ 1ರಿಂದ ಮಳೆಯಾಗುವ ಸಾಧ್ಯತೆಗಳಿದ್ದು, ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ ಸಹಿತ 13 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.