Thursday, January 29

ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ ಮೈಸೂರು ದಸರಾ ಉದ್ಘಾಟನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾವನ್ನುಈ ಬಾರಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ.

ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯ ತಿಳಿಸಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ದಸರಾ ಉದ್ಘಾಟಕರ ಆಯ್ಕೆಯನ್ನು ನನ್ನ ತೀರ್ಮಾನಕ್ಕೆ ಬಿಡಲಾಗಿತ್ತು. ಖ್ಯಾತ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಆಯ್ಕೆ ಮಾಡಿದ್ದೇನೆ ಎಂದು ತಿಳಿಸಿದರು.

ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಗೆ ದಸರಾ ಉದ್ಘಾಟನೆಯ ಆಹ್ವಾನ ನೀಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.