Sunday, September 20

ಅಯ್ಯಪ್ಪ ಭಕ್ತರ ವಾಹನ ಅಪಘಾತ; ನಾಲ್ವರು ಸಾವು

ತುಮಕೂರು: ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಅಯ್ಯಪ್ಪ ಭಕ್ತರು ಸಾವನ್ನಪ್ಪಿರುವ ಘಟನೆ ತುಮಕೂರು ಬಳಿ ಸಂಭವಿಸಿದೆ.

ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಭೀಕರ ಅಪಘಾತ ಸಂಭವಿಸಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದರೆ, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕೊಪ್ಪಳ ಜಿಲ್ಲೆ ಯಲಬುರ್ಗಾ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ. ಸಾಕ್ಷಿ (7), ವೆಂಕಟೇಶಪ್ಪ (30), ಮಾರತಪ್ಪ (35) ಹಾಗೂ ಗವಿಸಿದ್ದಪ್ಪ (40) ಎಂದು ಗುರುತಿಸಲಾಗಿದೆ.

ಶಬರಿಮಲೆ ಅಯ್ಯಪ್ಪ ದರ್ಶನ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಭಕ್ತರಿದ್ದ ಕ್ರೂಸರ್ ವಾಹನ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿರಬಹುದು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.