Friday, January 30

ಎ ಖಾತಾ, ಬಿ ಖಾತಾ ಮೂಲಕ ದುಡ್ಡು ಹೊಡೆಯುವ ಸಂಚು; ಬಿಜೆಪಿ ಆರೋಪ

ಬೆಂಗಳೂರು: ಎ ಖಾತಾ, ಬಿ ಖಾತಾ ವಿಚಾರವಾಗಿ ಸರ್ಕಾರ ದುಡ್ಡು ಹೊಡೆಯುವ ಸ್ಕೀಮು ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎ ಖಾತಾ, ಬಿ ಖಾತಾ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸಲಾಗುವುದು. ಇದರಲ್ಲಿ ಸರ್ಕಾರ ದುಡ್ಡು ಹೊಡೆಯುವ ಸ್ಕೀಮು ಮಾಡಿದೆ. ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವಿಲ್ಲ. ಆ ಹಣವನ್ನು ಹೊಂದಿಸಲು ಈ ಕ್ರಮ ತರಬೇಕಿಲ್ಲ. ಇಷ್ಟೊಂದು ಹಣವನ್ನು ಜನರು ಪಾವತಿಸಲು ಸಾಧ್ಯವಿಲ್ಲ ಎಂದರು.

ನೋಂದಣಿ ಮೇಲೆ 5% ಹೆಚ್ಚಿಸಿ ಕಮಿಶನ್‌ ಹೊಡೆಯಲು ಪ್ರಯತ್ನ ಮಾಡಲಾಗಿದೆ. ಕಸದ ಸೆಸ್‌ ತಂದು ಜನರ ಮೇಲೆ ಹೊರೆ ಹಾಕಲಾಗಿದೆ. ಬೆಸ್ಕಾಂನಲ್ಲಿ ಒಸಿ, ಸಿಸಿ ಮೂಲಕ ಹಣ ಸಂಗ್ರಹಿಸಲಾಗುತ್ತಿದೆ. ತಾತ್ಕಾಲಿಕವಾಗಿ ವಿದ್ಯುತ್‌ ಪಡೆದರೆ ಮೂರು ಪಟ್ಟು ಶುಲ್ಕ ನೀಡಬೇಕಿದ್ದು, ಇದನ್ನೇ ಬೆಸ್ಕಾಂನಿಂದ ಪ್ರೋತ್ಸಾಹಿಸಲಾಗುತ್ತಿದೆ ಎಂದು ಅಶೋಕ್ ಆರೋಪಿಸಿದರು.

ಜನರಿಗೆ ಇಂತಹ ದುಬಾರಿ ಬ್ರ್ಯಾಂಡ್‌ ಬೆಂಗಳೂರು ಬೇಕಿಲ್ಲ. ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ ಎಂದರು.