ಕಿಚ್ಚ ಸುದೀಪ್‌ಗೆ ಮಾತೃ ವಿಯೋಗ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಸಂಜೀವ್‌ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಕೊನೆಯಿಸಿರೆಳೆದಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರನ್ನು ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.