Thursday, May 14

ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

ರಾಯಪುರ: ಮಳೆಯಿಂದ ತಡವಾಗಿ ಆರಂಭವಾದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು.

ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 192 ರನ್ ಕಲೆಹಾಕಿತು. ಅಂಗ್‌ಕ್ರಿಷ್ ರಘುವಂಶಿ 46 ಎಸೆತಗಳಲ್ಲಿ 71 ರನ್ ಬಾರಿಸಿದರೆ, ರಿಂಕು ಸಿಂಗ್ ಅಜೇಯ 49 ರನ್ ಗಳಿಸಿದರು. ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್ ಮತ್ತು ರಸಿಕ್ ಸಲಾಂ ತಲಾ ಒಂದು ವಿಕೆಟ್ ಪಡೆದರು.

193 ರನ್ ಗುರಿ ಬೆನ್ನತ್ತಿದ ಆರ್‌ಸಿಬಿ 194 ರನ್ ಬಾರಿಸಿ ಗೆಲುವಿನ ನಗೆ ಬೀರಿತು. ಜಾಕೋಬ್ ಬೆಥಲ್ 15 ರನ್‌ಗೆ ಔಟಾದರೂ, ವಿರಾಟ್ ಕೊಹ್ಲಿ ಅಜೇಯ ಶತಕ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಈ ಪಂದ್ಯದಲ್ಲಿ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 14,000 ರನ್ ಪೂರೈಸಿದ ಸಾಧನೆ ಮಾಡಿದರು. ಇಎಸ್‌ಪಿಎನ್‌ಕ್ರಿಕ್ಇನ್ಫೊ ಪ್ರಕಾರ, ಅವರು 426 ಟಿ20 ಪಂದ್ಯಗಳ 409 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪಿದ್ದಾರೆ.

ಸುಮಾರು ಎರಡು ದಶಕಗಳ ವೃತ್ತಿಜೀವನದಲ್ಲಿ ಕೊಹ್ಲಿ 9 ಶತಕ ಹಾಗೂ 108 ಅರ್ಧಶತಕಗಳನ್ನು ದಾಖಲಿಸಿದ್ದು, ಟಿ20ಯಲ್ಲಿ ವೇಗವಾಗಿ 14,000 ರನ್ ಪೂರೈಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.