ಗಾಜಾ: ಇಸ್ರೇಲ್ ಪ್ಯಾಲೆಸ್ಟೈನ್ ನಡುವಿನ ಸಮರ ತಾರಕಕ್ಕೇರಿದ್ದು, ಸೇನಾ ದಾಳಿಯಲ್ಲಿ ಹಮಾಸ್ ಮುಖ್ಯಸ್ಥನ ಹತ್ಯೆಯಾಗಿದೆ.
ಗಾಜಾದಲ್ಲಿ ಐಡಿಎಫ್ ಕಾರ್ಯಾಚರಣೆ ವೇಳೆ 3 ಉಗ್ರರು ಸಾವನ್ನಪ್ಪಿದ್ದು ಇವರಲ್ಲಿ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸೇರಿದ್ದಾನೆ ಎಂದು ಇಸ್ರೇಲ್ ಸರ್ಕಾರ ಹೇಳಿದೆ.
ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಹೇಳಿಕೆ ನೀಡಿ, ಗಾಜಾದಲ್ಲಿನ ಮಿಲಿಟರಿ ಕಾರ್ಯಾಚರಣೆಯಲ್ಲಿ ಯಾಹ್ಯಾ ಸಿನ್ವಾರ್ ಹತ್ಯೆಯಾಗಿರುವ ಬಗ್ಗೆ ಐಡಿಎಫ್ ತನಿಖೆ ನಡೆಸಿದೆ ಎಂದು ತಿಳಿಸಿದ್ದಾರೆ.