Friday, January 30

ಜಾತಿಗಣತಿ ಪ್ರತಿಧ್ವನಿ: ಮುಸಲ್ಮಾನರು ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಅಲ್ಪಸಂಖ್ಯಾತ ಎಂದು ಪರಿಗಣಿಸದಿರಿ

ಬೆಂಗಳೂರು: ಜಾತಿಗಣತಿ ಪ್ರಕಾರ ಮುಸಲ್ಮಾನರು ಅತೀ ಹೆಚ್ಚಿನ ಸಂಖ್ಯೆಯಲ್ಲಿರುವುದು ನಿಜವಾಗಿದ್ದರೆ ಅವರನ್ನು ಅಲ್ಪಸಂಖ್ಯಾತ ಎಂಬ ಹಣೆಪಟ್ಟಿಯಿಂದ ತೆಗೆದು ಹಾಕಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮುಸಲ್ಮಾನರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಮೀಸಲಾತಿಯ ಅಗತ್ಯವೂ ಇಲ್ಲ ಎಂದವರು ಪ್ರತಿಪಾದಿಸಿದ್ದಾರೆ. ಮುಸಲ್ಮಾನರನ್ನು ಓಲೈಸಲು ಕಾಂಗ್ರೆಸ್‌ ಪಕ್ಷ ಹಿಂದೂಗಳನ್ನು ಜಾತಿ ಜಾತಿಗಳಾಗಿ ಭಾಗ ಮಾಡುತ್ತಿದೆ ಎಂದು ಅಶೋಕ್ ಆರೋಪಿಸಿದ್ದಾರೆ.