ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’: ಮತ್ತೊಂದು ವೀಡಿಯೋ ರಿವೀಲ್

ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’ ಸಿನಿಮಾದ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟೆಂಬರ್​ 27ರಂದು ‘ದೇವರ’ ಸಿನಿಮಾ ಬಿಡುಗಡೆ​ ಆಗಲಿದೆ.

ಇದೇ ಸಂದರ್ಭದಲ್ಲಿ ‘ದೇವರ’ ಚಿತ್ರದ ಮತ್ತೊಂದು ಟ್ರೇಲರ್ ಬಿಡುಗಡೆಯಾಗಿದೆ. ‘ಆರ್​ಆರ್​ಆರ್​’ ಸಿನಿಮಾ ಬಳಿಕ ಜೂನಿಯರ್​ ಎನ್‌ಟಿಆರ್​ ಅವರು ಈ ಚಿತ್ರದಲ್ಲಿ ಕಮಾಲ್ ಪ್ರದರ್ಶಿಸಲಿದ್ದು, ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ.