
ನವದೆಹಲಿ: ದೇಶದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಅಪೂರ್ವ ಸಾಧನೆ ದಾಖಲಿಸಿದ ಪ್ರಧಾನಿ ನರೇಂದ್ರ ಮೋದಿ, ಅತ್ಯಧಿಕ ಅವಧಿ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ನಾಯಕರಾಗಿ ಹೊರಹೊಮ್ಮಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ಸ್ಥಾನದಿಂದ ಆರಂಭಿಸಿ ಪ್ರಧಾನಮಂತ್ರಿ ಹುದ್ದೆಯವರೆಗೆ ಒಟ್ಟು 8,931 ದಿನಗಳ ಆಡಳಿತ ಪೂರ್ಣಗೊಳಿಸಿರುವ ಮೋದಿ, ದೀರ್ಘಕಾಲ ಆಡಳಿತ ನಡೆಸಿದ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ.
ಈ ಸಾಧನೆಯೊಂದಿಗೆ ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ದಾಖಲೆಯನ್ನು ಮೀರಿ, ಮೋದಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಸತತ ಮೂರು ಲೋಕಸಭಾ ಚುನಾವಣೆಗಳಲ್ಲಿ ಗೆಲುವು ಸಾಧಿಸಿರುವ ಮೋದಿ, ದೀರ್ಘಕಾಲದ ಜನಮಂಡೇಟ್ ಮತ್ತು ರಾಜಕೀಯ ಸ್ಥಿರತೆಯ ಸಂಕೇತವಾಗಿ ಪರಿಣಮಿಸಿದ್ದಾರೆ.
ಡಿಜಿಟಲ್ ವೇದಿಕೆಗಳಲ್ಲಿಯೂ ಭಾರೀ ಜನಬೆಂಬಲ ಗಳಿಸಿರುವ ಅವರು, ಸಾಮಾಜಿಕ ಮಾಧ್ಯಮಗಳಲ್ಲಿ ವಿಶ್ವ ನಾಯಕರ ಪೈಕಿ ಪ್ರಮುಖ ಸ್ಥಾನದಲ್ಲಿದ್ದಾರೆ.
ಒಟ್ಟಾರೆ, ದಶಕಗಳ ಸಾರ್ವಜನಿಕ ಸೇವೆ ಮತ್ತು ನಿರಂತರ ನಾಯಕತ್ವದೊಂದಿಗೆ ಮೋದಿ ಸಾಧಿಸಿರುವ ಈ ಮೈಲಿಗಲ್ಲು ಭಾರತೀಯ ರಾಜಕೀಯದಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿದೆ.
