Wednesday, January 28

ದಾವಣಗೆರೆ ಗಣೇಶ ಮೆರವಣಿಗೆ ಮೇಲೆ ಕಲ್ಲುತೂರಾಟ ಘಟನೆ; 30 ಮಂದಿಯ ಬಂಧನ

ದಾವಣಗೆರೆ: ದಾವಣಗೆರೆಯ ಚಾಮರಾಜಪೇಟೆ ವೃತ್ತದ ಬಳಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 30ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.

ಘಟನೆಯಲ್ಲಿ ಇಬ್ಬರು ಕಾನ್‌ಸ್ಟೆಬಲ್‌ಗಳು ಗಾಯಗೊಂಡಿದ್ದರು. ಗಲಭೆ ಸಂಬಂಧ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವತ್ತಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಗುರಿಪಡಿಸಿದ್ದಾರೆ.