ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಕನಕಪುರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜನರಿಗಾಗಿ ಮೀಸಲು: ಡಿಕೆಶಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 4 ನೇ ಶನಿವಾರ ಕನಕಪುರಕ್ಕೆ ಭೇಟಿ ನೀಡಲಿದ್ದಾರೆ.

ಆ ದಿನಗಳಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಜನರ ಸಮಸ್ಯೆ, ಅಹವಾಲುಗಳನ್ನು ಆಲಿಸಲಿದ್ದಾರೆ. ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ನಾನಾ ವಿಧಾನಸಭಾ ಕ್ಷೇತ್ರಗಳ ಜನರು ತಮ್ಮನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ತೊಂದರೆ ತೆಗೆದುಕೊಳ್ಳುವುದು ಬೇಡ. ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸಿ, ಅಹವಾಲು ಸ್ವೀಕರಿಸಲಿದ್ದೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.