Wednesday, January 28

ಬಳ್ಳಾರಿ ಗಲಾಟೆ: ಗುಂಡು ಹಾರಿಸಿದ ಮೂಲವನ್ನು ಪತ್ತೆಹಚ್ಚಲು ಫಾರೆನ್ಸಿಕ್ ಪರೀಕ್ಷೆ

ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಶಾಸಕ ಭರತ್ ರೆಡ್ಡಿ ಬೆಂಬಲಿಗರ ನಡುವೆ ನಡೆದ ಗಲಾಟೆ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವಿನ ಪ್ರಕರಣದಲ್ಲಿ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿಯವರ ಗನ್‌ಮ್ಯಾನ್ ಹಾರಿಸಿದ ಗುಂಡು ತಗುಲಿಯೇ ಯುವಕ ರಾಜಶೇಖರ್ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ತನಿಖೆಯ ಭಾಗವಾಗಿ ಬ್ರೂಸ್‌ಪೇಟೆ ಪೊಲೀಸರು ಐದು ಬಂದೂಕುಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಗುಂಡು ಹಾರಿಸಿದ ಮೂಲವನ್ನು ಪತ್ತೆಹಚ್ಚಲು ಫಾರೆನ್ಸಿಕ್ ಪರೀಕ್ಷೆಗೂ ಕ್ರಮ ಕೈಗೊಳ್ಳಲಾಗಿದೆ.

ಘಟನೆಗೆ ಸಂಬಂಧಿಸಿ ಎರಡೂ ಗುಂಪುಗಳ ವಿರುದ್ಧ ಪೊಲೀಸರು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದು, ಇದುವರೆಗೆ 50ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೊಳಪಡಿಸಲಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.