Sunday, February 15

ಬಸ್-ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಮೃತ್ಯು

ಬೆಂಗಳೂರು: ನೆಲಮಂಗಲ ಸಮೀಪ ಜಿಂದಾಲ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.

ತುಮಕೂರು ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ, ಎದುರು ದಿಕ್ಕಿನಲ್ಲಿ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಿಸದೆ ಆತನು ಸಹ ಮೃತಪಟ್ಟಿದ್ದಾನೆ.

ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.