ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಸೂಕ್ತ ರಕ್ಷಣೆ ನೀಡಿಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ವಾಲ್ಮೀಕಿ ನಿಗಮ ಹಗರಣ ಮತ್ತು ಮುಡಾ ಸೈಟ್ ಹಂಚಿಕೆ ಕರ್ಮಕಾಣದ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಗೆ ಅನುಮತಿ ನೀಡುವ ವಿಚಾರದಲ್ಲಿ ಸರ್ಕಾರ ಸೂಕ್ತ ಕ್ರಮವಹಿಸುವ ಅನುಮಾನ ಹಿನ್ನೆಲೆ ಬಿಜೆಪಿ ನಾಯಕರು ಹೈಕೋರ್ಟ್ ಬಾಗಿಲು ತಟ್ಟಿದ್ದಾರೆ. ಪಾದಯಾತ್ರೆಗೆ ಅನುಮತಿಗಾಗಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ರಿಟ್ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನಿಂದ ಮೈಸೂರು ಪಾದಯಾತ್ರೆಗೆ ಅನುಮತಿ ಕೇಳಿದರೂ ಸರ್ಕಾರ ಪ್ರತಿಕ್ರಿಯಿಸಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ವಿಚಾರಣೆ ಆರಂಭವಾಗುವ ಹೊತ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆದರೆ ಸೂಕ್ತ ಭದ್ರತೆ ವಿಚಾರದಲ್ಲಿ ಅರ್ಜಿದಾರರು ಅನುಮಾನ ವ್ಯಕ್ತಪಡಿಸಿದ್ದಾರೆ. ಅರ್ಜಿ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಕಾನೂನು ಪ್ರಕಾರ ಪಾದಯಾತ್ರೆ ಭದ್ರತೆ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರು, ರಾಮನಗರ, ಮಂಡ್ಯ ಹಾಗೂ ಮೈಸೂರು ಜಿಲ್ಕ್ಲಾ ಪೊಲೀಸ್​ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.