Saturday, December 6

ಬಿಹಾರ: ಜೆಡಿಯು ಶಾಸಕಾಂಗ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆ

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ, ಜೆಡಿಯು ಶಾಸಕಾಂಗ ಪಕ್ಷ ಹೊಸ ನಾಯಕತ್ವವನ್ನು ಆಯ್ಕೆ ಮಾಡಿದೆ. ಬುಧವಾರ ಪಾಟ್ನಾದಲ್ಲಿ ನಡೆದ ಜೆಡಿಯು ಶಾಸಕಾಂಗ ಸಭೆಯಲ್ಲಿ, ಪಕ್ಷದ ರಾಷ್ಟ್ರಾಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಏಕಮತದಿಂದ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಗುರುವಾರ ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಿತೀಶ್ ಕುಮಾರ್ ಅವರು 10ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಪ್ರಮಾಣ ವಚನಕ್ಕೂ ಮುನ್ನ ಶಾಸಕಾಂಗ ನಾಯಕನಾಗಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ.

ಎನ್‌ಡಿಎ ಸಭೆಗೂ ಮುಂಚೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ನಂತರ ನಿತೀಶ್ ಕುಮಾರ್ ಅವರನ್ನು ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕರಾಗಿಯೂ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಸಚಿವ ಶ್ರಾವಣ್ ಕುಮಾರ್ ಮಾಹಿತಿ ನೀಡಿದರು.