ಬೆಂಗಳೂರಿನ BGS ಆಸ್ಪತ್ರೆಗೆ ನಟ ದರ್ಶನ್ ದಾಖಲು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ಅವರು ಬೆನ್ನು ನೋವಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಜಿಎಸ್​ ಗ್ಲೋಬಲ್ ಆಸ್ಪತ್ರೆಗೆ ದರ್ಶನ್ ಅವರು ಶನಿವಾರ ದಾಖಲಾಗಿದ್ದಾರೆ.

ದರ್ಶನ್ ಆಗಮನ ಹಿನಯ ಆಸ್ಪತ್ರೆಗೆ ಬಳಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ಕಾರಣದಿಂದಾಗಿ ಆಸ್ಪತ್ರೆ ಬಳಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.