ಬೆಂಗಳೂರು: ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ.

ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿ, ಗೌರವ ವಂದನೆ ಸ್ವೀಕರಿಸಿದರು.