Tuesday, June 24

ಭಾರತದಲ್ಲೂ HMPV ಆತಂಕ; ಕೇಂದ್ರದಿಂದ ಹೈ ಅಲರ್ಟ್

ನವದೆಹಲಿ: ಚೀನಾದಲ್ಲಿ ತಲ್ಲಣ ಸೃಷ್ಟಿಸಿರುವ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (HMPV) ಭಾರತದಲ್ಲೂ ಆತಂಕ ಸೃಷ್ಟಿಸಿದೆ. ಕರ್ನಾಟಕದ ಇಬ್ಬರು ಮಕ್ಕಳಲ್ಲಿ ಸೋಂಕು ದೃಢಪಟ್ಟ ಬೆನ್ನಲ್ಲೇ ಗುಜರಾತ್ ರಾಜ್ಯದಲ್ಲೂ ಪ್ರಕರಣ ಪತ್ತೆಯಾಗಿದೆ. ಈಮೂಲಕ ದೇಶಾದಲ್ಲಿ ಸೋಂಕಿತರ ಸಂಖ್ಯೆ 5ಕ್ಕೇರಿದೆ.

HMPV ಸೋಂಕಿನ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ, ಇದು ಹೊಸ ವೈರಸ್ ಅಲ್ಲ, 2001ರಲ್ಲಿಯೇ ವೈರಸ್ ಅನ್ನು ಗುರುತಿಸಲಾಗಿದೆ ಎಂದಿದ್ದಾರೆ. ಆದರೂ ಪರಿಸ್ಥಿತಿಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ, ನಾವು ಎಲ್ಲಾ ಅಂಶಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ ಎಂದುತಿಳಿಸಿದ್ದಾರೆ.