Saturday, December 6

ಮಹಾ ಡಿಸಿಎಂ ಆಪ್ತ ಬಾಬಾ ಸಿದ್ದಿಕಿ ಹತ್ಯೆ; ಬೆಚ್ಚಿ ಬಿದ್ದ ಮುಂಬೈ

ಮುಂಬೈ: ಮಹಾರಾಷ್ಟ್ರದಲ್ಲಿ ಭೀಕರ ಕಗ್ಗೊಲೆ ಜನರನ್ನು ಬೆಚ್ಚಿಬೀಳಿಸಿದೆ.

ಮುಂಬಯಿ ನಗರದ ಬಾಂದ್ರಾ ಪ್ರದೇಶದಲ್ಲಿ ಎನ್‌ಸಿಪಿ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ ಮೇಲೆ ಗುಂಡಿನ ದಾಳಿ ನಡೆದಿದೆ. ಹಂತಕರ ಗುಂಡಿಗೆ ಸಿದ್ದಿಕಿ ಬಲಿಯಾಗಿದ್ದಾರೆ.
ಶನಿವಾರ ರಾತ್ರಿ ಬಾಬಾ ಸಿದ್ದಿಕಿ ಅವರ ಕಚೇರಿ ಬಳಿಯೇ ಘಟನೆ ನಡೆದಿದ್ದು, ಗುಂಡಿನ ದಾಳಿಯ ನಂತರ ಬಾಬಾ ಸಿದ್ದಿಕಿ ಅವರನ್ನು ಮುಂಬಯಿನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಸಿದ್ದಿಕಿ ಬದುಕುಳಿಯಲಿಲ್ಲ ಎಂದು ಆಪ್ತರು ಹೇಳಿದ್ದಾರೆ.‌

ಈ ನಡುವೆ ಹತ್ಯೆ ಬೆನ್ನಲ್ಲೇ ಕ್ಷಿಪ್ರ ಕಾರ್ಯಾಚರಣೆ ಕೈಗೊಂಡ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.