Saturday, December 6

ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರವೇ ಕಲ್ಬುರ್ಗಿಗೆ ಭೇಟಿ, ವಿವಿಧ ಯೋಜನೆಗಳಿಗೆ ಚಾಲನೆ

ಕಲಬುರಗಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರವೇ ಕಲ್ಬುರ್ಗಿಗೆ ಭೇಟಿ ನೀಡಲಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಂಬಂಧ ಹಲವಾರು ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸದ್ಯವೇ ಚಾಲನೆ ನೀಡಲಿದ್ದಾರೆ. ಈ ಸಂವಂಧ ಅವರು ಕಲ್ಬುರ್ಗಿ ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ.

ತಾಯಿ ಮಕ್ಕಳ ಆಸ್ಪತ್ರೆ ಸೇರಿದಂತೆ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳ ಇತರೆ ಆರೋಗ್ಯ ಇಲಾಖೆಗಳ ಯೋಜನೆಗಳಿಗೂ ಕೂಡ ಕಲ್ಬುರ್ಗಿಯಲ್ಲಿಯೇ ಶಂಕುಸ್ಥಾಪನೆ ನೇರವೇಸಲಾಗುವುದು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದಿಯಾಗಿ ಇತರೆ ಸಚಿವರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.