Sunday, December 7

ಮುಡಾ ಹಗರಣ ಆರೋಪದ ಪ್ರತಿಧ್ವನಿ; ಆಯುಕ್ತರ ವಿರುದ್ದ ಕ್ರಮ ಕುರಿತು ಸರ್ಕಾರ ಆದೇಶ

ಮೈಸೂರು: ಮೂಡಾ ನಿವೇಶನ ಅಕ್ರಮ ಹಂಚಿಕೆ ಆರೋಪದ ಸುಳಿಯಲ್ಲಿ ಸಿಲುಕಿರುವ ಪ್ರಾಧಿಕಾರದ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿದೆ.

ಮೂಡಾ ಹಗರಣದಲ್ಲಿ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಸರ್ಕಾರ ಅಮಾನತ್ತು ಮಾಡಿ ಆದೇಶಿಸಿದೆ.

ಸರ್ಕಾರದ ನಿರ್ದೇಶನಗಳ ಉಲ್ಲಂಘನೆ, ನಿಯಮಗಳ ಜಾರಿಯಲ್ಲಿನ ಲೋಪ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಆರೋಪಗಳ ಬೆನ್ನಲ್ಲೇ ಇಲಾಖಾ ವಿಚಾರಣೆಯನ್ನು ಬಾಕಿಯಿರಿಸಿ ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶಿದೆ.