Monday, September 8

ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಿ ಹಸಿರು ನಿಶಾನೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು.

ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಅವರು ನೇರವಾಗಿ ಚಾಲನೆ ನೀಡಿದರೆ, ಅಮೃತಸರ–ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ಅಜ್ನಿ (ನಾಗ್ಪುರ)–ಪುಣೆ ನಡುವೆ ಸಂಚರಿಸಲಿರುವ ಇನ್ನೆರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು.