Friday, January 30

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸೆ.29ರವರೆಗೂ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 29ರವರೆಗೂ ಮಳೆಯಾಗುವ ಸಾಧ್ಯತೆಗಳಿವೆ.

ಈ ಕುರಿತಂತೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ,, ಚಿಕ್ಕಮಗಳೂರು ಸೇರಿದಂತೆ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಕೋಲಾರ ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.