Wednesday, March 18

ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

ಮಂಗಳೂರು: ಮೂಡುಬಿದಿರೆ (Moodbidri) ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ (Sudheer Reddy) ಅವರು ಆರೋಪಿ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಕೌಟುಂಬಿಕ ವ್ಯಾಜ್ಯಗಳು ಅಥವಾ ದೂರುಗಳೊಂದಿಗೆ ಠಾಣೆಗೆ ಬರುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರೆಂಬ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಮೂವರು ಮಹಿಳೆಯರು ಬೆಂಗಳೂರು (Bengaluru)ನಲ್ಲಿ ದೂರು ಸಲ್ಲಿಸಿದ್ದು, ದೂರನ್ನು ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರ ಕಚೇರಿ (Director General of Police), ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಮಹಿಳಾ ಆಯೋಗ (State Women Commission)ಕ್ಕೆ ದೂರು ನೀಡಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ (Sudheer Reddy) ಅವರು ಆರೋಪಿ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.