ವಯನಾಡ್ ಭೂಕುಸಿತದಲ್ಲಿ ಮೃತರ ಸಂಖ್ಯೆ 315ಕ್ಕೆ ಏರಿಕೆ

ವಯನಾಡ್: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 315ಕ್ಕೂ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರೀ ಮಳೆಯ ಸಂದರ್ಭದಲ್ಲಿ ವಯನಾಡ್‌ನಲ್ಲಿ ಭೂ ಕುಸಿತ ಸಂಭವಿಸಿದೆ. ಅನೇಕ ಮನೆಗಳು ನೆಲಸಮವಾಗಿದ್ದು, ನೂರಾರು ಕುಟುಂಬಗಳು ನೆಲೆ ಕಳೆದುಕೊಂಡಿವೆ.

ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ. ಭಾನುವಾರದಿಂದೀಚೆಗೆ ನಿರಂತರ ರಕ್ಷಣಾ ಕಾರ್ಯಾಚರಣೆ ಸಾಗಿದ್ದು, ಮೃತದೇಹಗಳು ಪತ್ತೆಯಾಗುತ್ತಲೇ ಇವೆ. ಅಧಿಕಾರಿಗಳ ಪ್ರಕಾರ ಈವರೆಗೂ ಸಾವನ್ನಪ್ಪಿದವರ ಸಂಖ್ಯೆ 315 ದಾಟಿದೆ. 200ಕ್ಕೂ ಹೆಚ್ಚು‌ ಮಂದಿ‌ ನಾಪತ್ತೆಯಾಗಿದ್ದು ಮೃತದೇಹಗಳಿಗಾಗಿ ಹುಡುಕಾಟ ಸಾಗಿದೆ. ಸಾವಿರಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಈ ಭಾರೀ ಭೂಕುಸಿತ ಸಂಭವಿಸಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ಬು ಮುಂದುವರಿಸಿದ್ದಾರೆ.‌