Sunday, May 3

ವಿವೇಕ್ ವಿಹಾರ್‌ನಲ್ಲಿ ಭೀಕರ ಅಗ್ನಿ ಅವಘಡ: 9 ಸಾವು, ಹಲವರಿಗೆ ಗಾಯ

ನವದೆಹಲಿ: ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ದುರ್ಘಟನೆ ಸ್ಥಳೀಯರಲ್ಲಿ ಭಾರೀ ಆತಂಕ ಮೂಡಿಸಿದೆ.

ಪೊಲೀಸರ ಪ್ರಕಾರ, ಬೆಳಗಿನ ಜಾವ ಸುಮಾರು 4 ಗಂಟೆ ಸುಮಾರಿಗೆ ನಾಲ್ಕು ಅಂತಸ್ತಿನ ಕಟ್ಟಡದ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಮೇಲ್ಮಹಡಿಗಳಿಗೆ ಹರಡಿದೆ. ತಕ್ಷಣವೇ 14 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ಸುಮಾರು ಎರಡು ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

ರಕ್ಷಣಾ ಕಾರ್ಯಾಚರಣೆಯಲ್ಲಿ 10ಕ್ಕೂ ಹೆಚ್ಚು ಜನರನ್ನು ಕಟ್ಟಡದಿಂದ ಹೊರತೆಗೆದಿದ್ದು, ಅವರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಸ್ತುತ ಏಳು ಮಂದಿ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.