Tuesday, March 17

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಹಿತಿ ಹಂಪಾ ನಾಗರಾಜಯ್ಯ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ನಾಡಹಬ್ಬ ದಸರಾಕ್ಕೆ ಇಂದು ಅದ್ದೂರಿ ಚಾಲನೆ ಸಿಕ್ಕಿದೆ.

ಗುರುವಾರ ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾ ವೈಭವಕ್ಕೆ ಚಾಲನೆ ನೀಡಿದರು. ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಸಮಾರಂಭ ನೆರವೇರಿತು.