
ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ ಸಿಎಂ ಬಸವರಾಜ ಬೊಮ್ಮಾಯಿ ಅರೆಒಪಿಸಿದ್ದಾರೆ.
ಲಂಚ ಆರೋಪದಲ್ಲಿ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬೊಮ್ಮಾಯಿ, ಒತ್ತಾಯಪೂರ್ವಕವಾಗಿ ಅವರಿಗೆ ಹಣ ನೀಡುವ ಪ್ರಯತ್ನ ನಡೆದಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಪ್ರಕಾರ ಲಂಚ ನೀಡುವುದೂ ಹಾಗೂ ಲಂಚ ಸ್ವೀಕರಿಸಲು ಒತ್ತಾಯಿಸುವುದೂ ತಪ್ಪಾಗಿದೆ. ಆದ್ದರಿಂದ ಎಲ್ಲ ಆಯಾಮಗಳಲ್ಲಿ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ.
ಶಾಸಕ ಚಂದ್ರು ಲಮಾಣಿ ಅವರ ಆಸ್ಪತ್ರೆಯಲ್ಲಿ ನಾನಾ ವರ್ಗದ ಜನರು ಭೇಟಿ ನೀಡುತ್ತಾರೆ. ಹೀಗಾಗಿ ಈ ಪ್ರಕರಣದ ಕುರಿತು ಇನ್ನೂ ಸ್ಪಷ್ಟತೆ ಇಲ್ಲ. ಲೋಕಾಯುಕ್ತರು ಪ್ರಕರಣ ದಾಖಲಿಸಿದ್ದಾರೆ. ತನಿಖೆಯ ಬಳಿಕ ಸತ್ಯಾಸತ್ಯತೆ ಬಹಿರಂಗವಾಗಲಿದೆ. ಒಬ್ಬ ಯುವ ವೈದ್ಯರು ಉತ್ತಮ ಸೇವೆ ಸಲ್ಲಿಸುತ್ತಿರುವ ಈ ಸಂದರ್ಭದಲ್ಲಿ, ಇಂತಹ ಕರಿ ನೆರಳು ಅವರ ಸೇವೆಗೆ ಅಡ್ಡಿಯಾಗಬಾರದು. ಲಂಚ ನೀಡಲು ಒತ್ತಾಯಿಸುವುದೂ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಅಪರಾಧವಾಗಿರುವುದರಿಂದ, ಎಲ್ಲಾ ದೃಷ್ಟಿಕೋಣಗಳಿಂದ ಸಮಗ್ರ ತನಿಖೆ ಅಗತ್ಯವಾಗಿದೆ ಎಂದವರು ಪ್ರತಿಪಾದಿಸಿದ್ದಾರೆ.
ಯಾರಾದರೂ ಒಬ್ಬ ವ್ಯಕ್ತಿಯ ಸಾರ್ವಜನಿಕ ಜೀವನವನ್ನು ಷಡ್ಯಂತ್ರದ ಮೂಲಕ ಹಾಳು ಮಾಡುವ ಪ್ರಯತ್ನವನ್ನು ಯಾರೂ ಉತ್ತೇಜಿಸಬಾರದು. ಇಂತಹ ಕ್ರಮಗಳನ್ನು ಖಂಡಿಸಬೇಕು ಎಂದಿದ್ದಾರೆ.
“ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ”
ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ. ಒತ್ತಾಯಪೂರ್ವಕವಾಗಿ ಅವರಿಗೆ ಹಣ ನೀಡುವ ಪ್ರಯತ್ನ ನಡೆದಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಪ್ರಕಾರ ಲಂಚ ನೀಡುವುದೂ ಹಾಗೂ ಲಂಚ ಸ್ವೀಕರಿಸಲು ಒತ್ತಾಯಿಸುವುದೂ ತಪ್ಪಾಗಿದೆ. ಆದ್ದರಿಂದ ಎಲ್ಲ ಆಯಾಮಗಳಲ್ಲಿ… pic.twitter.com/nmzaNGFAzE
— Basavaraj S Bommai (@BSBommai) February 23, 2026
