Thursday, January 29

ಸರ್ಕಾರ ಈಗ ಪಾಪರ್‌ ಆಗಿದೆ. ನೌಕರರಿಗೆ, ಸಿಬ್ಬಂದಿಗೆ ಸಂಬಳ ಕೊಡಲು ಆಗುತ್ತಿಲ್ಲ

ಬೆಂಗಳೂರು: ಸರ್ಕಾರ ಈಗ ಪಾಪರ್‌ ಆಗಿದೆ. ನೌಕರರಿಗೆ, ಸಿಬ್ಬಂದಿಗೆ ಸಂಬಳ ಕೊಡಲು ಆಗುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರ ರೈತವಿರೋಧಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ದೂರಿದರು.

ರಾಜ್ಯಾದ್ಯಂತ ಮೆಕ್ಕೆಜೋಳ ಬೆಳೆದ ರೈತರಿಗೆ ಬೆಂಬಲ ಬೆಲೆ ನೀಡಿ ಖರೀದಿಸಲು ರೈತರು ಬೇಡಿಕೆ ಇಟ್ಟಿದ್ದಾರೆ. ಆದರೆ ರೈತ ವಿರೋಧಿ ಸರ್ಕಾರ ಒಂದೇ ಒಂದು ಖರೀದಿ ಕೇಂದ್ರ ತೆರೆದಿಲ್ಲ. ಕಾಲಾಹರಣ ಮಾಡದೆ ಕೂಡಲೇ ಖರೀದಿ ಆರಂಭಿಸಬೇಕು, ಇಲ್ಲದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಈರುಳ್ಳಿ ಬೆಳೆಗಾರರು ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ. ಮಾರುಕಟ್ಟೆಯಲ್ಲಿ ಸಿಗುತ್ತಿರುವ ದರ ಕಳೆ ಕೀಳಿಸಿದ ಕೂಲಿಯ ಹಣ ಗಿಟ್ಟುತ್ತಿಲ್ಲ. ಇಂತಹ ಸ್ಥಿತಿಯಲ್ಲಿ ನೆರವಿಗೆ ಧಾವಿಸಿ ಈರುಳ್ಳಿ ಖರೀದಿಸಲು ಕ್ರಮ ಕೈಗೊಳ್ಳಬೇಕಿದ್ದ ಸರ್ಕಾರ ಮೀನಾ ಮೇಷ ಎಣಿಸುತ್ತಿದೆ. ಮಾತಿಗೊಮ್ಮೆ ತಮ್ಮದು ರೈತ ಪರ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಬೆನ್ನು ತಟ್ಟಿಕೊಳ್ಳುತ್ತಾರೆ, ಇದೇನಾ ರೈತರ ಪರವಾದ ಕಾಳಜಿ ಎಂದು ವ್ಯಗ್ಯವಾಡಿದರು.