Tuesday, June 24

ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರಿಂದ ಮತ್ತೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರ ಬಳಿಕ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ವಿಜಯಪುರ, ಕಲಬುರಗಿ ಯಾದಗಿರಿ, ರಾಯಚೂರು, ಬೀದರ್​ನಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.