‘ಮೈಸೂರು ಪಾದಯಾತ್ರೆ’ ವೇಳೆ ಬಿಜೆಪಿ ಕಾರ್ಯಕರ್ತೆ ಸಾವು..

ರಾಮನಗರ: ಮುಡಾ ಹಗರಣ ಖಂಡಿಸಿ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಡೆಸಿತ್ತಿರುವ ಪಾದಯಾತ್ರೆ ನಡುವೆ ಕಾರ್ಯಕರ್ತೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಿಜೆಪಿ- ಜೆಡಿಎಸ್​ ಬೆಂಗಳೂರಿನಿಂದ ಮೈಸೂರು ಪಾದಯಾತ್ರೆ ನಡೆಸತ್ತಿದ್ದು, ಮೂರನೇ ದಿನವಾದ ಸೋಮವಾರ ಈ ಜಾಥಾ ರಾಮನಗರ ಜಿಲ್ಲೆ ಪ್ರವೇಶಿಸಿದೆ. ಚನ್ನಪಟ್ಟಣದಲ್ಲಿ ಪಾದಯಾತ್ರೆಯಲ್ಲಿ ನಡೆಯುತ್ತಿರುವ ವೇಳೆ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಬಸವನಗುಡಿಯ ಬಿಜೆಪಿ ಕಾರ್ಯಕರ್ತೆ ಗೌರಮ್ಮ ಅವರು ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದು, ಕೂಡಲೇ ಚನ್ನಪಟ್ಟಣದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಾಗಲೇ ಅವರು ಗೌರಮ್ಮ ಕೊನೆಯುಸಿರೆಳೆದಿದ್ದಾರೆ. ಕಾರ್ಯಕರ್ತೆಯ ನಿಧನಕ್ಕೆ ಬಿಜೆಪಿ-ಜೆಡಿಎಸ್ ನಾಯಕರು ದುಃಖ ವ್ಯಕ್ತಪಡಿಸಿದ್ದಾರೆ.