Tuesday, June 23

ಮತ್ತೆ ಒಂದು ವಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರಾವಳಿ, ಮಲೆನಾಡಿನಲ್ಲಿ ಮಳೆ ಮತ್ತೆ ಬಿರುಸಾಗಲಿದೆ. ಒಂದು ವಾರ ಕಾಲ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಿಸಿತು ಸಲಾಗಿದ್ದು, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಸುತ್ತಮುತ್ತ ಜಿಕ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ..