Thursday, March 19

ಸ್ವಾತಂತ್ರ್ಯೋತ್ಸವ ಸಂಭ್ರಮ.. ಎಲ್ಲೆಲ್ಲೂ ದೇಶಪ್ರೇಮದ ಮಹಾಹಬ್ಬದ ಸಂಭ್ರಮ

ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ.

ಮನೆಮನೆಗಳಲ್ಲೂ ತಿಂರಂಗ ಧ್ವಜ ಹಾರಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮುನ್ನುಡಿ ಬರೆದಿರುವ ಹರ್ ಘರ್ ತಿರಂಗ ಅಭಿಯಾನಕ್ಕೂ ಭಾರೀ ಬೆಂಬಲ ವ್ಯಕ್ತವಾಗಿದೆ.

ಇದೇ ವೇಳೆ, ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜರೋಹಣ ಮಾಡಿದರು.

ಶಾಲೆಗಳಲ್ಲಿ, ಸಂಘಸಂಸ್ಥೆಗಳಲ್ಲೂ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳು ಗಮನಸೆಳೆದವು.