Thursday, January 29

ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಸ್ವಲ್ಪ ದಿನ ವಿರಮಿಸಿರುವ ಮಳೆರಾಯ ಮತ್ತೆ ಆಗಮಿಸಲಿದ್ದಾನೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೋಗ್ಗ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಗಳಿವೆ. ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.