Thursday, January 29

ಗುತ್ತಿಗೆದಾರನಿಗೆ ಬೆದರಿಕೆ ಆರೋಪ; ಬಿಜೆಪಿ ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಆರೋಪಕ್ಕೆ ಗುರಿಯಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶಾಸಕ ಮುನಿರತ್ನ ಅವರನ್ನು ಶನಿವಾರ ಕೋಲಾರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುನಿರತ್ನ ಅವರು ತಮಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚಲುವರಾಜು ಅವರು ದೂರು ನೀಡಿದ್ದರು. ಅದರಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಪ್ರಕರಣ ದಾಖಲಾಗುತ್ತಿದ್ದಂತೆಯೇ ಮುನಿರತ್ನ ತಲೆಮರೆಸಿಕೊಂಡಿದ್ದಾರೆ ಎಂದೂ ಹೇಳಲಾಗುತ್ತಿತ್ತು. ಈ ನಡುವೆಯೇ ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪ ಪೊಲೀಸರು ಮುನಿರತ್ನ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.