Friday, January 30

ದೊಡ್ಡಬಳ್ಳಾಪುರ; ಬೆಳೆಗಳ ಮಧ್ಯೆ ಗಾಂಜಾ ಗಿಡಗಳು..!

ದೊಡ್ಡಬಳ್ಳಾಪುರ: ಬೆಳೆಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆಸಿ, ಪೋಷಣೆ ಮಾಡಿ ಬೆಳೆಸಿರುವುದನ್ನು ಗ್ರಾಮಾಂತರ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ, ತೂಬಗೆರೆ ಹೋಬಳಿ, ಗೆದ್ದಲಪಾಳ್ಯ ಗ್ರಾಮದ ನಿವಾಸಿ ನಾರಾಯಣಸ್ವಾಮಿ ಎಂಬ ವ್ಯಕ್ತಿ ತನ್ನ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅನೇತೃತ್ವದ ತಂಡ ದಾಳಿ ನಡೆಸಿ, ಸುಮಾರು 8 ಕೆಜಿ 700 ಗ್ರಾಂ ತೂಕದ, ಒಟ್ಟು 568 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.