Friday, June 26

ಮಂಗಳೂರಿನಲ್ಲಿ ಪೊಲೀಸ್ ಬೇಟೆ; ಬಾಂಗ್ಲಾ ಪ್ರಜೆಗಳ ಬಂಧನ

ಮಂಗಳೂರು: ನಕಲಿ ಪಾಸ್‌ಪೋರ್ಟ್‌ ಹೊಂದಿದ್ದ ಬಾಂಗ್ಲಾದೇಶ ಪ್ರಜೆಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ದುಬಾೖಗೆ ಪ್ರಯಾಣಿಸಲು ಯತ್ನಿಸಿದ ಸಂದರ್ಭದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತ ನೀಡಿದ ಸುಳಿವನ್ನಾಧರಿಸಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜೆಯನ್ನು ವಶಕ್ಕೆ ಪಡೆಯಲಾಗಿದ್ದು, ಆತ ನೀಡಿದ ಸುಳಿವನ್ನಾಧರಿಸಿ ಉಡುಪಿಯಲ್ಲಿ ಹಲವು ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ವಶಕ್ಕೆ ಪಡೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.