Wednesday, August 12

ಕೋಟೆಕಾರು ಬ್ಯಾಂಕ್​ ದರೋಡೆ ಪ್ರಕರಣ; ಆರೋಪಿಗಳ ಬಂಧನ

ಮಂಗಳೂರು: ಕೋಟೆಕಾರು ಬ್ಯಾಂಕ್​ ದರೋಡೆ ಪ್ರಕರಣ ಬೇಧಿಸಿದುವ ಮಂಗಳೂರು ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಜನವರಿ 17ರಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡಿನಲ್ಲಿರುವ ಸಹಕಾರಿ ಬ್ಯಾಂಕ್ ಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಸಿನಿಮೀಯ ರೀತಿಯಲ್ಲಿ ಸುಮಾರು 12 ಕೋಟಿ ರೂ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದರು.

ಮಹಾರಾಷ್ಟ್ರದ ಕಾರು ಬಳಸಿ ದರೋಡೆಕೋರು ಪರಾರಿಯಾಗಿದ್ದರು. ದರೋಡೆಕೋರರ ಹೆಜ್ಜೆ ಜಾಡು ಬೆನ್ನತ್ತಿದ ಪೊಲೀಸರು, ತಮಿಳುನಾಡಿನ ತಿರುನೆಲ್ವೇಲಿಗೆ ಆರೋಪಿಗಳು ಪರಾರಿಯಾಗಿರುವುದನ್ನು ಪತ್ತೆ ಮಾಡಿದರು.

ಕ್ಷಿಪ್ರ ಕಾರ್ಯಾಚರಣೆಗಿಳಿದ ಪೊಲೀಸರು ಮೂವರು ಆರೋಪಿಗಳನ್ನು ಮಧುರೈ ಸಮೀಪ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮುರುಗನ್, ಪ್ರಕಾಶ್ (ಜೈಸ್ವಾ) ಹಾಗೂ ಮಣಿವಣ್ಣನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.‌

ತಮಿಳುನಾಡಿನ ವಿವಿಧ ಪ್ರದೇಶದಲ್ಲಿ ಮೂವರು ಆರೋಪಿಗಳನ್ನು ಸೆರೆಹಿಡಿಯಲಾಗಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಕಾರು, ನಗದು, ತಲ್ವಾರ್‌, 2 ಪಿಸ್ತೂಲ್‌ ಜಪ್ತಿ ಮಾಡಲಾಗಿದೆ. ಇನ್ನುಳಿದ ಆರೋಪಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅನುಪಮ್ ಅಗರ್ವಾಲ್‌ ತಿಳಿಸಿದ್ದಾರೆ.