Friday, January 30

ಹಂಪಿ ಕನ್ನಡ ವಿವಿ: ಭಾರತಿ ಟಿ. ಅವರಿಗೆ ಪಿಎಚ್.ಡಿ ಪ್ರಧಾನ

ಹಂಪಿ: ಕನ್ನಡ ವಿಶ್ವವಿದ್ಯಾಲಯ ಹಂಪಿ, ಭಾಷಾ ನಿಕಾಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಭಾರತಿ ಟಿ. ಅವರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ.

ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಆರ್. ವೆಂಕಟೇಶ ಇಂದ್ವಾಡಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಆಧುನಿಕ ಕನ್ನಡ ನಾಟಕ ಸಾಹಿತ್ಯದ ಮೇಲೆ ಜನಪದ ಸಾಹಿತ್ಯದ ಪ್ರೇರಣೆ ಮತ್ತು ಪ್ರಭಾವ (1950ರ ನಂತರ ಆಯ್ದ ನಾಟಕಗಳನ್ನು ಅನುಲಕ್ಷಿಸಿ)” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಕನ್ನಡ ವಿಶ್ವವಿದ್ಯಾಲಯ ಹಂಪಿ ಪ್ರಕಟಣೆಯಲ್ಲಿ ತಿಳಿಸಿದೆ.