Sunday, December 7

ದೆಹಲಿ ಸುತ್ತಮುತ್ತ ಭೂಕಂಪನ ಹಿನ್ನೆಲೆ; ಎಚ್ಚರವಹಿಸಲು ಜನತೆಗೆ ಪ್ರಧಾನಿ ಸಲಹೆ

ನವದೆಹಲಿ: ದೆಹಲಿ-ಎನ್‌ಸಿಆರ್ ಸುತ್ತಮುತ್ತ ಲಘು ಭೂಕಂಪನವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜಧಾನಿ ಸುತ್ತಮುತ್ತಲ ನಿವಾಸಿಗಳು ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಪ್ರಧಾನಿ, ದೆಹಲಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಕಂಪನಗಳು ಅನುಭವವಾಗಿವೆ. ಎಲ್ಲರೂ ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು, ಸಂಭವನೀಯ ನಂತರದ ಕಂಪನಗಳ ಬಗ್ಗೆ ಎಚ್ಚರದಿಂದಿರಲು ಒತ್ತಾಯಿಸುತ್ತಿದ್ದಾರೆ. ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.