Saturday, December 6

ಹನಿಟ್ರ್ಯಾಪ್‌ ಪ್ರಕರಣ ಬಗ್ಗೆ ಗೃಹ ಸಚಿವರಿಂದ ಸದನದ ಒಳಗೊಂದು ಹೊರಗೊಂದು ಹೇಳಿಕೆ?

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದ ಕುರಿತಾಗಿ ಗೃಹ ಸಚಿವರು ಸದನದ ಒಳಗೊಂದು ಮತ್ತು ಸದನದ ಹೊರಗೊಂದು ಹೇಳಿಕೆ ನೀಡುತ್ತಿದ್ದಾರೆ. ಪ್ರಕರಣವನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರು ಅಥವಾ ಸಿಬಿಐ ಮೂಲಕ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹನಿಟ್ರ್ಯಾಪ್ ಆರೋಪ ಕುರಿತಂತೆ ಪ್ರತಿಕ್ರಿಯಿಸಿದರು. ಹನಿಟ್ರ್ಯಾಪ್‌ ಗೊಂದಲದ ನಡುವೆಯೂ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ಒದಗಿಸುವ ಮಸೂದೆಗೆ ಅನುಮೋದನೆ ಪಡೆದುಕೊಂಡಿದೆ, ಇದರ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟಿಸಲಿದೆ ಎಂದು ತಿಳಿಸಿದರು.