Thursday, January 29

ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಹಲವರು ಪೊಲೀಸ್ ವಶಕ್ಕೆ

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿ ಭಾಷಿಗರಿಂದ ಕನ್ನಡಿಗರ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ಕರ್ನಾಟಕ ಬಂದ್​ಗೆ ಕರೆ ನೀಡಿವೆ.

ಬಂದ್ ಕರೆ ಬೆಂಬಲಿಸಿ ಹಲವಾರು ಅಂಗಡಿ-ಮುಂಗಟ್ಟುಗಳು ಮುಚ್ಚಿವೆ ಆದರೆ, ವಾಹನ ಸಂಚಾರಕ್ಕೆ ಅಡ್ಡಿಯಾಗಿಲ್ಲ. ಬೆಂಗಳೂರು ಸಹಿತ ರಾಜ್ಯದ ಬಹುತೇಕ ಕಡೆ ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ಹಲವೆಡೆ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಹಲವೆಡೆ ಅಂಗಡಿಗಳನ್ನು ಮುಚ್ಚಿಸುವಂತೆ ಮನವೊಲಿಸುತ್ತಿದ್ದ ದೃಶ್ಯಗಳು ಕಂಡುಬಂತು.

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.